ಬೆಂಗಳೂರು,ಜನವರಿ,1,2021(www.justkannada.in): ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೆ ಸಚಿವ ಸಂಪುಟ ವಿಸ್ತರಣೆಯ ಗುಸುಗುಸು ಇದೀಗ ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಅಧಿಕಾರ ನನ್ನ ಪಿತ್ರಾರ್ಜಿತ ಆಸ್ತಿ ಅಲ್ಲ. ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧ ಎಂದಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಗೋವಿಂದ ಕಾರಜೋಳ, ನಾನು ಅಧಿಕಾರದಲ್ಲಿರಬೇಕು ಅಂತಾ ಬಯಸಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ಪಕ್ಷ ಹೇಳುವುದನ್ನ ನಾನು ಕೇಳುತ್ತೇನೆ ಅಧಿಕಾರನನ್ನ ಪಿತ್ರಾರ್ಜಿತ ಆಸ್ತಿ ಅಲ್ಲ ಎಂದರು.
ಇತ್ತೀಚೆಗಷ್ಟೆ ಮಾಧ್ಯಮಗಳೊಂದಿಗೆ ಮಾತನಾಡಿದ್ಧ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ, ಎರಡು ಮೂರು ಬಾರಿ ಸಚಿವರಾಗಿದ್ದವರು ಹೊಸಮುಖಗಳಿಗೆ ಅವಕಾಶ ಮಾಡಿಕೊಡಿ. ತಮ್ಮ ಅನುಭವವನ್ನ ಪಕ್ಷಸಂಘಟನೆಯಲ್ಲಿ ಬಳಸಿಕೊಳ್ಳಿ ಎಂದು ಹೇಳಿಕೆ ನೀಡಿ ಹಿರಿಯ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
Key words: Power – not -my inheritance-decision –party-Minister- Govinda Karajola.