ಮೈಸೂರು,ಮಾ,1,2021(www.justkannada.in): ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಲಕ್ಷ್ಮೀಪುರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಅತಿಯಾದ ವಿದ್ಯುತ್ ಪ್ರವಹಿಸಿದ ಪರಿಣಾಮ ಮೀಟರ್ ಬೋರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಿದ್ಯುತ್ ಅವಘಡದಿಂದಾಗಿ ವಿದ್ಯುತ್ ವೈರಿಂಗ್ ಸುಟ್ಟು ಭಸ್ಮವಾಗಿದೆ.
ಸದ್ಯ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷ್ಮೀಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Key words: Power – Short circuit-mysore-college.