ಹುಬ್ಬಳ್ಳಿ, ಜನವರಿ 3,2025 (www.justkannada.in): ಕಾಂಗ್ರೆಸ್ ನವರು ಗ್ಯಾರಂಟಿ ಹೆಸರಲ್ಲಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದರು. ಈಗ ಕಾಂಗ್ರೆಸ್ ನಿಜಬಣ್ಣ ಬಯಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಕುರಿತು ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾಟಕದಲ್ಲಿ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಕಾಂಗ್ರೆಸ್ ದೇಶದಲ್ಲಿ ಸುಳ್ಳು ಗ್ಯಾರಂಟಿ ಕೊಟ್ಟಿತ್ತು. ಅದು ಈಗ ಎಕ್ಸ್ ಪೋಸ್ ಆಗುತ್ತಿದೆ. ಉಚಿತ ವಿದ್ಯುತ್ ಎಂದರು, ಈಗ ವಿದ್ಯುತ್ ದರ ಹೆಚ್ಚಳವಾಗಿದೆ. ಕಾಕಾಸಾಹೇಬ್ ಪಾಟೀಲ್, ಮಹದೇವಪ್ಪ ನಿನಗೂ ಫ್ರೀ ಅಂದರು. ಹಾಲು, ಪೆಟ್ರೋಲ್, ಡಿಸೇಲ್ ಗೆ ಸೆಸ್ ಹಾಕಿದ್ದಾರೆ. ಆಸ್ತಿ ನೋಂದಣಿ ದರ ಹೆಚ್ಚಳವಾಗಿದೆ. ಮದ್ಯದ ದರ ಹೆಚ್ಚಳವಾಗಿದೆ. ಈಗ ಸರ್ಕಾರ ಬಸ್ ಟಿಕೆಟ್ ದರ ಕೂಡ ಹೆಚ್ಚಳ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಸಾರಿಗೆ ಸಂಸ್ಥೆ 2,000 ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ. ಸಿದ್ದರಾಮಯ್ಯ ಸರ್ಕಾರ ದಿವಾಳಿ ಆಗಿದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
Key words: Bus fare , hike, Union Minister, Prahlad Joshi, state government