‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ,ಮಾರ್ಚ್,13,2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರಿ ಸಂಬಳ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು,   ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗ್ಯಾರಂಟಿ ಅನುಷ್ಟಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೇನು ಕೆಲಸ?  ಮಂತ್ರಿ ಅಧಿಕಾರಿಗಳು ಏನು ಕತ್ತೆ ಕಾಯುತ್ತಿದ್ದಾರಾ. ಕಾರ್ಯಕರ್ತರಿಗೆ ಸರ್ಕಾರಿ ಸಂಬಳ ನೀಡುತ್ತಾ ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ರಾಜ್ಯ ಸರ್ಕಾರ ಜನರಿಗೆ ದ್ರೋಹ ಬಗೆದಿದೆ ಎಂದು ಕಿಡಿಕಾರಿದರು.

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.  ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಯಾರನ್ನೋ ರಕ್ಷಿಸಲು ಹೋಗಿ ಸರ್ಕಾರ ಗೊಂದಲಕ್ಕೆ ಸಿಲುಕಿದೆ.  ಕೇಸ್ ಅನ್ನು  ಸರ್ಕಾರ ನಿರ್ವಹಿಸುತ್ತಿರುವ ರೀತಿ ನೋಡಿದರೇ ಸರ್ಕಾರ ವಿಫಲವಾಗಿದ ಎಂದು ಎದ್ದು ಕಾಣುತ್ತಿದೆ. ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಕೆಲವರ ಹೆಸರು,  ರಾಜಕಾರಣಿಗಳ ಸಚಿವರ ಬಗ್ಗೆ ವರದಿ ಬರುತ್ತಿದೆ ಎಂದರು.

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಹಿಂದೆ ಸಚಿವರಿಬ್ಬರ ಕೈವಾಡವಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಆರೋಪಿಸಿದ್ದರು.

Key words: Government salary, congress workers, Union Minister, Prahlad Joshi