ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು

ಬೆಂಗಳೂರು,ಜನವರಿ,4,2025 (www.justkannada.in):  ಮಹಿಳೆ ಮೇಲೆ  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನ ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ .

ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದು ಇದೀಗ ಪೊಲೀಸರು ಪ್ರಜ್ವಲ್ ರೇವಣ್ಣರನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.

ಆರು ತಿಂಗಳ ಹಿಂದೆ ಬಂಧನವಾಗಿದ್ದ ಪ್ರಜ್ವಲ್ ರೇವಣ್ಣ ಅಂದಿನಿಂದ ಜೈಲಿನಲ್ಲಿ ಇದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

Key words: Rape case,  Prajwal Revanna, court