ನವದೆಹಲಿ,ಏಪ್ರಿಲ್,30,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಧಾನಿ ಮೋದಿ ಈ ಬಗ್ಗೆ ಉತ್ತರಿಸಲಿ ಎಂದಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣ ಯಾವುದೇ ಕಾರಣಕ್ಕೂ ಸಹಿಸಲ್ಲ. ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ. ಈ ಬಗ್ಗೆ ಯಾವ ಕ್ರಮ ಕೈಗೊಂಡಿದೆ. ಪ್ರಧಾನಿ ಮೋದಿ ಪ್ರಶ್ನೆ ಮಾಡುವ ಬದಲು ನಿಮ್ಮದೇ ಸಿಎಂ, ಡಿಸಿಎಂ ಪ್ರಶ್ನೆ ಮಾಡಿ ಎಂದು ಅಮಿತ್ ಶಾ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿದ ಅಮಿತ್ ಶಾ, ಕರ್ನಾಟಕದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ. ಆದರೆ ರಾಜ್ಯ ಸರ್ಕಾರ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲದೇಶದ ನಾರಿ ಶಕ್ತಿ , ಮಾತೃಶಕ್ತಿ ಜೊತೆ ನಾವು ಇದ್ದೇವೆ. ಮಾತೃಶಕ್ತಿಗೆ ಅವಮಾನವಾದರೇ ಸಹಿಸಿಕೊಳ್ಳುವುದಿಲ್ಲ. ಆದರೆ ಕಾಂಗ್ರೆಸ್ ಪಕ್ಷ ನಮ್ಮ ಮೇಲೆ ಆರೋಪ ಮಾಡುತ್ತಿದೆ. ಅಲ್ಲಿ ಯಾವ ಸರ್ಕಾರವಿದೆ. ಕಾಂಗ್ರೆಸ್ ಸರ್ಕಾವಿದೆ. ಚುನಾವಣೆ ವೇಳೆಯೇ ವಿಡಿಯೋ ಬಂದಿದೆ. ಈ ವಿಚಾರದಲ್ಲಿ ನಾವು ಕ್ರಮ ಕೈಗೊಳ್ಳಲಾಗುವುದಿಲ್ಲ. ಇದು ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರ. ಅವರೇ ಕ್ರಮ ಕೈಗೊಳ್ಳಬೇಕು ಎಂದರು.
Key words: Prajwal Revanna, case, Amit Shah