ಹಾಸನ,ಜನವರಿ,13,2025 (www.justkannada.in) : ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಪ್ರಕರಣ ದಾಖಲಾಗಿದೆ.
ಜನವರಿ 9 ರಂದು ಸಕಲೇಶಪುರದಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಪ್ರಮೋದ್ ಮುತಾಲಿಕ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಕಲೇಶಪುರ ಠಾಣೆಗೆ ಸಿಬ್ಬಂದಿ ಎಂ.ಕೆ. ಶ್ರೀಧರ್ ದೂರು ನೀಡಿದ್ದರು. ಇದೀಗ ಪ್ರಮೋದ್ ಮುತಾಲಿಕ್ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
Key words: Case, filed , against, Pramod Mutalik