ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್ ಎಂಬ ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಕುರಿತು ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಹೀಗೆ…..

ಮೈಸೂರು,ಮೇ,1,2019(www.justkannada.in):  ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಸಚಿವ ಜಿ.ಟಿ ದೇವೇಗೌಡರು ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ, ಜೆಡಿಎಸ್ ಮಾತ್ರವಲ್ಲ ‘ಕೈ’ ಕಾರ್ಯಕರ್ತರಿಂದಲೂ ನನಗೆ ಮತ ಬಂದಿದೆ ಎಂದು ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ,  ಮೈಸೂರಿನಲ್ಲಿ ಮೊದಲಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಬೆಂಬಲಿಸುತ್ತಾರೆ. ಹೀಗಾಗಿ ಈ ಬಾರಿಯೂ ಸಹ ಜೆಡಿಎಸ್ ಜತೆ ಕಾಂಗ್ರೆಸ್ ಮತಗಳೂ ನನಗೆ ಬಂದಿವೆ.  ಹೀಗಾಗಿ ಮೈಸೂರಿನಲ್ಲಿ ಬಿಜೆಪಿ ಸತತ ಗೆಲುವು ಸಾಧ್ಯವಾಗುತ್ತದೆ ಎಂದು ನುಡಿದರು.

ಇಂದು ಮೈಸೂರಿನಲ್ಲಿ ಮಾತನಾಡಿದ್ದ ಸಚಿವ ಜಿ.ಟಿ ದೇವೇಗೌಡರು, ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡಬೇಕಿತ್ತು. ಆದರೆ ಮೈತ್ರಿಯಲ್ಲಿ ತಪ್ಪಾಗಿದೆ.  ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್- ಕಾಂಗ್ರೆಸ್ ಜಿದ್ದಾಜಿದ್ದಿನ ಚುನಾವಣೆ ನಡೆಸಿದ್ದವು.  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ.  ಜೆಡಿಎಸ್‌ನವರು ಬಿಜೆಪಿಗೆ ವೋಟ್ ಹಾಕಿದ್ದಾರೆ. ಉದ್ಬೂರು ಗ್ರಾಮ ಪಂಚಾಯಿತಿ ಸೇರಿದಂತೆ ಕೆಲವು ಕಡೆ ಹೀಗಾಗಿದೆ ಎಂದಿದ್ದರು.

Key words: Pratap Simha- responded – statement -minister -GT Deve Gowda.