ಮಂಗಳೂರು,ಆಗಸ್ಟ್,10,2022(www.justkannada.in): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಕಾನೂನು- ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಪ್ರಕರಣ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ ಏಳು ಮಂದಿಯನ್ನು ಬಂಧಿಸಲಾಗಿದೆ. ಇವರ ವಿರುದ್ಧ ಹತ್ಯೆಗೆ ಸಂಚು ರೂಪಿಸಿದ ಆರೋಪ ಇದೆ. ಇವರನ್ನು ಸಂಬಂಧಿಸಿದ ಸ್ಥಳಗಳಿಗೆ ಕರೆದುಕೊಂಡು ಹೋಗಿ ಮಹಜರು ನಡೆಸಲಾಗಿದೆ. ಕೆಲವು ಆರೋಪಿಗಳಿಗೆ ಪಿಎಫ್ ಐ ಲಿಂಕ್ ಇದೆ. ಈ ಬಗ್ಗೆ ನಾವು ತನಿಖೆ ಮಾಡುತ್ತಿದ್ದೇವೆ. ತನಿಖೆ ಬಳಿಕ ಯಾರಿಗೆಲ್ಲಾ ಲಿಂಕ್ ಇದೆ ಎಂದು ಗೊತ್ತಾಗಲಿದೆ. ಪೊಲೀಸರ ದಾಳಿ ವೇಳೆ ಆರೋಪಿಗಳು ಪರಾರಿಯಾಗುತ್ತಿದ್ದಾರೆ. ದಾಖಲೆ ಜೊತೆಗೆ ಮಾತನಾಡುತ್ತೇವೆ. ಸುಮ್ಮನೆ ಹೇಳಲ್ಲ. ಈಗ ಬಂಧನವಾಗಿರುವ 7 ಆರೋಪಿಗಳು ಸ್ಥಳೀಯರೇ ಆಗಿದ್ದಾರೆ ಎಂದರು.
ಬೆಳ್ಳಾರೆಯಲ್ಲಿ ಈ ಎಲ್ಲಾ ವಿಚಾರದ ಬಗ್ಗೆ ಸಭೆಯನ್ನು ಮಾಡುತ್ತೇವೆ. ಪ್ರಮುಖ ಆರೋಪಿಗಳಿಗೆ ವಾರಂಟ್ ಜಾರಿ ಮಾಡಿ, ಆಸ್ತಿಮುಟ್ಟುಗೋಲು ಹಾಕಲು ತೀರ್ಮಾನಿಸಲಾಗಿದೆ ಎಂದು ಅಲೋಕ್ ಕುಮಾರ್ ತಿಳಿಸಿದರು.
Key words: Praveen Nettaru- murder –case- ADGP- Alok Kumar.