ಮೈಸೂರು,ಅಕ್ಟೋಬರ್,5,2023(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಮೈಸೂರು ಅರಮನೆಯಲ್ಲೂ ರಾಜ ಪರಂಪರೆ ದಸರಾಗೆ ಸಿದ್ದತೆ ನಡೆಯುತ್ತಿದೆ.
ಅಕ್ಟೋಬರ್ 9ರ ಸೋಮವಾರದಂದು ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾ ವಿಧಿ ವಿಧಾನ ನೆರವೇರಲಿದ್ದು 10.05 ರಿಂದ 10.35ರ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ. ಗೋಶಾಲೆಗೆ ಪಟ್ಟದ ಆನೆ ಪಟ್ಟದ ಕುದುರೆ ಪಟ್ಟದ ಆನೆ ಪಟ್ಟದ ಹಸು ಆಗಮಿಸಲಿವೆ.
ಅಕ್ಟೋಬರ್ 15ರಂದು ಮೈಸೂರು ದಸರಾಗೆ ಚಾಲನೆ ದೊರೆಯಲಿದ್ದು ಇತ್ತ ಅರಮನೆಯಲ್ಲಿ ಭಾನುವಾರ 6 ಗಂಟೆಯಿಂದ 6.25ರವರ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ನೆರವೇರಲಿದೆ. ಬೆಳಿಗ್ಗೆ 07.05 ರಿಂದ 7.45ರ ಶುಭ ಲಗ್ನದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ ಅವರಿಗೂ ಕಂಕಣಧಾರಣೆ ಮಾಡಲಾಗುತ್ತದೆ
ಬೆಳಿಗ್ಗೆ 9.45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಗೋಶಾಲೆಗೆ ಪಟ್ಟದ ಆನೆ ಪಟ್ಟದ ಕುದುರೆ ಪಟ್ಟದ ಆನೆ ಪಟ್ಟದ ಹಸು ಆಗಮಿಸಲಿದ್ದು, ಬೆಳಿಗ್ಗೆ 10.15ಕ್ಕೆ ಕಳಸ ಪೂಜೆ ಸಿಂಹಾಸನ ಪೂಜೆ ನೆರವೇರಲಿದೆ.
ಅಂದು ಬೆಳಿಗ್ಗೆ 11.30ರಿಂದ 11.50ಕ್ಕೆ ರಾಜವಂಶಸ್ಥ ಯದುವೀರ್ ಅವರು ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಮಧ್ಯಾಹ್ನ 1.45 ರಿಂದ 02.05 ತಾಯಿ ಚಾಮುಂಡೇಶ್ವರಿಯನ್ನು ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ರವಾನೆ ಮಾಡಲಿದ್ದಾರೆ.
ಅಕ್ಟೋಬರ್ 20 ಶುಕ್ರವಾರ 10.05 ರಿಂದ 10.25ಕ್ಕೆ ಸರಸ್ವತಿ ಪೂಜ, ಅ. 21 ಶನಿವಾರ ಕಾಳರಾತ್ರಿ ಪೂಜೆ, ಅ. 22 ಭಾನುವಾರ ದುರ್ಗಾಷ್ಠಮಿ, ಅ.23 ಸೋಮವಾರ ದುರ್ಗಾಷ್ಠಮಿ ಆಚರಣೆ ನಡೆಯಲಿದೆ. ಬೆಳಿಗ್ಗೆ 5.30ಕ್ಕೆ ಚಂಡಿಹೋಮದೊಂದಿಗೆ ಪೂಜೆ ಆರಂಭವಾಗಲಿದೆ.
ಬೆ 5.30ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ ಪಟ್ಟದ ಕುದುರೆ ಪಟ್ಟದ ಆನೆ ಪಟ್ಟದ ಹಸು ಆಗಮಿಸಲಿದ್ದು, ಬೆ 6.05 ರಿಂದ 06.15ಕ್ಕೆ ಖಾಸಾ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಮಾಡಲಾಗುತ್ತದೆ. ಬೆ 07.15ಕ್ಕೆ ಖಾಸಾ ಆಯುಧಗಳು ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆಗೆ ವಾಪಸ್ ಆಗಲಿವೆ. ನಂತರ ಬೆಳಿಗ್ಗೆ 9.30ಕ್ಕೆ ಚಂಡಿಹೋಮ ಪೂರ್ಣಾಹುತಿ, ಬೆಳಿಗ್ಗೆ 11.45ಕ್ಕೆ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ ಪಟ್ಟದ ಕುದುರೆ ಪಟ್ಟದ ಆನೆ ಪಟ್ಟದ ಹಸು ಆಗಮಿಸಲಿವೆ.
ಮಧ್ಯಾಹ್ನ 12.20 ಆಯುಧಪೂಜೆ ಆರಂಭವಾಗಲಿದ್ದು 12.45ರವರೆಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧಗಳಿಗೆ ಪೂಜೆ ನೆರವೇರಲಿದೆ. ಸಂಜೆ ಖಾಸಗಿ ದರ್ಬಾರ್ ನಂತರ ಸಿಂಹ ವಿಸರ್ಜನೆಯಾಗಲಿದೆ.
ಅಕ್ಟೋಬರ್ 24 ಬುಧವಾರ ವಿಜಯದಶಮಿ ಆಚರಣೆ ನಡೆಯಲಿದ್ದು ಕಾರ್ಯಕ್ರಮಗಳ ಪಟ್ಟಿ ಹೀಗಿದೆ.
ಬೆಳಿಗ್ಗೆ 9.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ ಪಟ್ಟದ ಕುದುರೆ ಪಟ್ಟದ ಆನೆ ಪಟ್ಟದ ಹಸು ಆಗಮನ, ಕಲ್ಯಾಣಮಂಟಪದಲ್ಲಿ ಖಾಸ ಆಯುಧಗಳಿಗೆ ಪೂಜೆ, ಬೆಳಿಗ್ಗೆ 11 ರಿಂದ 11.40 ವಿಜಯದಶಮಿ ಮೆರವಣಿಗೆ. ಅರಮನೆ ಆನೆ ಬಾಗಿಲಿನಿಂದ ಅರಮನೆ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ, ಭುವನೇಶ್ವರಿ ದೇಗುಲದಲ್ಲಿ ಶಮಿ ಪೂಜೆ. ಪೂಜೆ ಮಗಿಸಿ ಅರಮನೆಗೆ ವಾಪಸ್ . ನಂತರ ನವೆಂಬರ್ 8 ಬುಧವಾರ ಸಿಂಹಾಸನ ಭದ್ರತಾ ಕೊಠಡಿಗೆ ರವಾನೆಯಾಗಲಿದೆ.
Key words: Preparations – Mysore Dasara- Palace.