ಬೆಂಗಳೂರು,ಡಿಸೆಂಬರ್,3,2021(www.justkannada.in): 18 ಸಾವಿರ ದಾದಿಯರಿಗೆ ಒಂದು ತಿಂಗಳ ತರಬೇತಿ, ಮಕ್ಕಳ ಐಸಿಯು ಸಿದ್ಧತೆ ಸೇರಿದಂತೆ ಕೋವಿಡ್ ಸಂಭವನೀಯ ಮೂರನೇ ಅಲೆಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವೈದ್ಯಕೀಯ ಕಾಲೇಜುಗಳ ನಿರ್ದೇಶಕರೊಂದಿಗೆ ಆರೋಗ್ಯಸೌಧದಲ್ಲಿ ವೀಡಿಯೋ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾಮಟ್ಟದಲ್ಲಿ ತೃತೀಯ ಹಂತದ ಆರೋಗ್ಯ ಸೇವೆ ನೀಡಲು 21 ವೈದ್ಯಕೀಯ ಕಾಲೇಜುಗಳಿದ್ದು, ಸಂಭವನೀಯ ಮೂರನೇ ಅಲೆ ಅಥವಾ ಹೊಸ ಓಮಿಕ್ರಾನ್ ವೈರಾಣು ಸಂಬಂಧಿತ ಚಿಕಿತ್ಸೆ ಸಿದ್ಧತೆ ಕುರಿತು ಚರ್ಚಿಸಲಾಗಿದೆ. ವೈದ್ಯಕೀಯ ಕಾಲೇಜುಗಳ ಎಚ್ ಒಡಿ, ಪ್ರೊಫೆಸರ್, ಹಿರಿಯ ವೈದ್ಯರು ಸೇರಿದಂತೆ ಪ್ರತಿಯೊಬ್ಬರೂ ಸಮಯೋಚಿತವಾಗಿ ವರ್ತಿಸಬೇಕು. ಗೃಹ ವೈದ್ಯರು, ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿಗಳು ಸೇರಿ ಪರಿಣಾಮಕಾರಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಒಂದನೇ ಮತ್ತು ಎರಡನೇ ಅಲೆಯಲ್ಲಿ ಐಸಿಯುನಲ್ಲಿದ್ದ ಸೋಂಕಿತರಿಗೆ ಚಿಕಿತ್ಸೆ ನೀಡಲು ದಾದಿಯರ ಕೊರತೆಯಾಗಿತ್ತು. ಈಗ ಆ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲಾಗಿದೆ. ಅಂತಿಮ ವರ್ಷದ ನರ್ಸಿಂಗ್, ಪ್ಯಾರಾ ಮೆಡಿಕಲ್ ನಲ್ಲಿ ಸುಮಾರು 18 ಸಾವಿರ ಮಂದಿ ಇದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಅವರಿಗೆ ಒಂದು ತಿಂಗಳ ತರಬೇತಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
ಮಕ್ಕಳ ಐಸಿಯು ಸಿದ್ಧ
ಸಚಿವ ಸಂಪುಟ ನಿರ್ಧಾರದಂತೆ ಮಕ್ಕಳ ಐಸಿಯುಗಳ ಸಿದ್ಧತೆಗೆ ಸೂಚಿಸಲಾಗಿದೆ. ಅಗತ್ಯ ಉಪಕರಣಗಳ ಖರೀದಿ ಹಾಗೂ ಇತರ ಎಲ್ಲಾ ವ್ಯವಸ್ಥೆಗಳ ಬಗ್ಗೆ ಸಂಪೂರ್ಣ ವಿವರ ಪಡೆಯಲಾಗಿದೆ. ಸಂಸ್ಥೆಗಳು ಮುಂದಿಟ್ಟ ಸಮಸ್ಯೆಗಳಿಗೂ ಪರಿಹಾರ ಸೂಚಿಸಲಾಗಿದೆ. ಗೃಹ ವೈದ್ಯರ ಕೋವಿಡ್ ರಿಸ್ಕ್ ಭತ್ಯೆ ಬಾಕಿ ಇದ್ದು, ಹಣಕಾಸು ಇಲಾಖೆಯಿಂದ 55 ಕೋಟಿ ರೂ. ಬಿಡುಗಡೆ ಮಾಡಿಸಲಾಗಿದೆ. ಒಟ್ಟಾರೆಯಾಗಿ ಬೇಕಾಗಿದ್ದ 73 ಕೋಟಿ ರೂ. ಅನ್ನು ಒಂದೆರಡು ದಿನಗಳಲ್ಲಿ ಖಾತೆಗೆ ಜಮೆಯಾಗುವಂತೆ ಕ್ರಮ ವಹಿಸಲಾಗಿದೆ. ಪ್ರತಿ ತಿಂಗಳು ವೇತನ ಖಾತೆಗೆ ಜಮೆಯಾಗಲು ತಾಂತ್ರಿಕ ಸಮಸ್ಯೆಗಳಿದ್ದವು. ಎಚ್‍ಆರ್ ಎಂಎಸ್ ನಲ್ಲಿ ನೋಂದಣಿಗೆ ಸಂಸ್ಥೆಗಳು 20 ದಿನಗಳ ಕಾಲ ತೆಗೆದುಕೊಂಡಿವೆ. ಡಿಸೆಂಬರ್ ನಿಂದ ವೇತನ ನೇರವಾಗಿ ಖಾತೆಗೆ ಜಮೆಯಾಗಲಿದೆ ಎಂದು ವಿವರಿಸಿದರು.
ಕೋವಿಡ್ ತಾಂತ್ರಿಕ ಸಮಿತಿ ಸಲಹೆಯ ಆಧಾರದ ಮೇಲೆ ಓಮಿಕ್ರಾನ್ ಸೋಂಕಿತರಿಗೆ ವಿಶೇಷ ಐಸಿಯು ಹಾಗೂ ವಾರ್ಡ್ ಕಲ್ಪಿಸಲಾಗುವುದು. ಡೆಲ್ಟಾ ಸೋಂಕಿತರಿಗೆ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಮೀಸಲಿಡಬೇಕಾದ ಹಾಸಿಗೆ ಹಾಗೂ ಐಸಿಯು ಬಗ್ಗೆ ನಿರ್ಧರಿಸಲಾಗುವುದು ಎಂದರು.
ಆಫ್ರಿಕಾದಿಂದ ಬಂದ 57 ಪ್ರಯಾಣಿಕರು ಪತ್ತೆ ಆಗದಿರುವ ಬಗ್ಗೆ ವಿಶೇಷ ಗಮನ ನೀಡಲಾಗಿದೆ. ಈ ಹಿಂದೆ ಪೊಲೀಸ್ ಇಲಾಖೆ ಹೀಗೆ ತಪ್ಪಿಸಿಕೊಂಡವರನ್ನು ಪತ್ತೆಹಚ್ಚಿ ಉತ್ತಮ ಕೆಲಸ ಮಾಡಿತ್ತು. ಈ ಬಾರಿಯೂ ಪೊಲೀಸ್ ಇಲಾಖೆ ದಕ್ಷತೆ ತೋರಲಿದೆ. ಆದರೆ ಈ ರೀತಿ ತಪ್ಪಿಸಿಕೊಳ್ಳುವ ಪ್ರಯಾಣಿಕರು ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ ವರ್ತಿಸಬೇಕು ಎಂದರು.
Key words: Preparing- Medical Colleges – third wave – treat –minister- Dr K.Sudhakar
ENGLISH SUMMARY…
Preparing Medical Colleges for possible third wave and to treat the new variant: Dr K Sudhakar, Health & Family Welfare, Medical Education Minister
Training 18,000 nurses, says Minister
Bengaluru, Friday December 3: Including a month training for 18,000 nurses, ramping up pediatric ICUs, Medical colleges across the state have been instructed to make necessary preparations in order to be ready for possible third Covid wave in Karnataka said, Dr K Sudhakar, Minister of Health and Medical Education.
After chairing a video conference meeting with the directors of the medical colleges, on possible third wave and the new Omicron virus related treatment, Health Minister told reporters that there are 21 medical colleges offering health services at the district level. Everyone, including the HOD, Professors and Senior Doctors of Medical Colleges have been advised to stand up to the demand and provide effective treatment. They can also avail the help of resident doctors, and final year medical students, Minister said.
During the first and second wave, state faced a shortage of nurses to treat those who were in the ICUs. Now that problem has been solved. There are about 18,000 people in final year nursing and paramedics. Officials have been asked to provide one month training for them, in collaboration with Rajiv Gandhi University of Health sciences and other institutions, said Dr K Sudhakar.
Paediatric ICUs are ready
As was decided in the Cabinet, officials are instructed to prepare of ICUs for children. We have got the information on all necessary equipment and other systems which are required. able. Issues raised by institutions are also addressed and solutions provided for the issues flagged by them. Resident doctor’s Covid risk allowance to the tune of Rs 55 crore is pending and Finance Dept has released the amount. from the Department of Finance. Total amount required is nearly Rs 73 crore and it will be credited to the concerned account within a couple of days. We were facing some technical glitches to credit salaries to their account. Institutions have taken twenty days to be registered in HRMS. From December onwards, salaries will be directly credited to their bank accounts, Minister informed the reporters.
As per the advice of the Covid Technical Committee, a special ICU and ward will be provided for the Omicron infected. Those who are infected with Delta will be treated in a separate ward. Number of beds and ICUs to be reserved will be decided soon, he said.
Priority has been given to trace those 57 passengers from Africa. In the past, our police department has done a good job of tracking down those who have escaped. And our Police demonstrate their efficiency and will track them all. But I urge the passengers to act responsibly and with social concern, Dr K.Sudhakar said.