ಬೆಂಗಳೂರು,ಏಪ್ರಿಲ್,27,2021(www.justkannada.in): ಮೇ 24 ರಿಂದ ಪ್ರಾರಂಭವಾಗುವ ದ್ವಿತೀಯ ಪರೀಕ್ಷೆಗೆ ಪೂರ್ವ ಸಿದ್ಧತೆ ಹಿನ್ನೆಲೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆ ಕುರಿತು ಆದೇಶ ಹೊರಡಿಸಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ರಾಜ್ಯದಲ್ಲಿ ಕೋವಿಡ್-19ರ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ: ಆರ್ಡಿ 58 ಟಿಎನ್ಆರ್ 2020 ದಿನಾಂಕ: 26-04-2021 ರಲ್ಲಿ ಸರ್ಕಾರವು ಸುರಕ್ಷತಾ ದೃಷ್ಟಿಯಿಂದ ದಿನಾಂಕ 12-05-2021 ರವರೆಗೆ ಜನತಾ ಕರ್ಮ್ಯೂ ವಿಧಿಸಿ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು, ಸದರಿ ಆದೇಶದ ಮಾರ್ಗಸೂಚಿಗಳನ್ನು ಪಾಲಿಸಲು ತಿಳಿಸಿದೆ. ಸರ್ಕಾರವು ತುರ್ತುಸೇವೆಗೆ ನಿಯೋಜಿಸುವ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು ದಿನಾಂಕ 24-05-2021 ರಿಂದ 16-06-2021 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ನಡೆಸುತ್ತಿದೆ. ಸದರಿ ಪರೀಕ್ಷೆಯ ಪೂರ್ವ ಸಿದ್ಧತಾ ಕಾರ್ಯಗಳನ್ನು ನಡೆಸಬೇಕಾಗಿದೆ. ಈ ಸಂಬಂಧ ಜಿಲ್ಲಾ ಉಪ ನಿರ್ದೇಶಕರು ಕಚೇರಿಯಲ್ಲಿ ಹಾಜರಿದ್ದು ತಮ್ಮ ಕಛೇರಿಯ ಸಿಬ್ಬಂದಿಗಳಿಗೆ ತಾವು ಸೂಚಿಸುವ ಕೆಲಸವನ್ನು ನಿರ್ವಹಿಸುವಂತೆ ಕ್ರಮ ಕೈಗೊಳ್ಳುವುದು. ಅದೇ ರೀತಿ ಆಯಾ ಕಾಲೇಜಿನ ಪ್ರಾಂಶುಪಾಲರು ಪರೀಕ್ಷಾ ಕಾರ್ಯಗಳು ಅವಶ್ಯಕತೆ ಅನುಗುಣವಾಗಿ ಉಪನ್ಯಾಸಕರು ಹಾಗೂ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ಹಾಜರುಪಡಿಸಿಕೊಳ್ಳುವುದು. ಜೊತೆಗೆ ಈ ಸಮಯದಲ್ಲಿ ಆಯಾ ಜಿಲ್ಲಾಧಿಕಾರಿಗಳು ಸುರಕ್ಷತೆಯ ದೃಷ್ಟಿಯಿಂದ ಸೂಚಿಸುವ ಸೂಚನೆಯ ಮೇರೆಗೆ ಕಾರ್ಯ ನಿರ್ವಹಿಸಲು ತಿಳಿಸಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Key words: Preparing –second puc-exam-Order officer- staff –PU Department