ಬೆಂಗಳೂರು,ನವೆಂಬರ್,15,2020(www.justkannada.in) : ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಳಿಕ ಇದೀಗ ಮತ್ತೆರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ.ಮಸ್ಕಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಈ ನಡುವೆ ಸರ್ಕಾರ ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಉಡುಗೊರೆ ನೀಡಿದೆ.
ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಆಧುನೀಕರಣಕ್ಕೆ ಹಣ ಬಿಡುಗಡೆ
ಮಸ್ಕಿ ನಾಲಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಆಧುನೀಕರಣಕ್ಕೆ ಹಣ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡುವ ಮೂಲಕ ಚುನಾವಣೆ ತಯಾರಿ ಆರಂಭಿಸಿದೆ. ಮಸ್ಕಿ ನಾಲೆಯ ಕಾಲುವೆ ಆಧುನೀಕರಣಕ್ಕೆ 52.54 ಕೋಟಿ ರೂ. ಯೋಜನಾ ವರದಿಗೆ ಸರ್ಕಾರ ಅನುಮತಿ ನೀಡಿದರುವುದು ಇದಕ್ಕೆ ಸಾಕ್ಷಿಯಾಗಿದೆ.
ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಸ್ಪರ್ಧೆ ಖಚಿತ
ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಇನ್ನು ಬಿಜೆಪಿ ನಾಯಕ ಬಸನಗೌಡ ತುರವಿಹಾಳ ಅವರನ್ನು ಸೆಳೆದು ಕಾಂಗ್ರೆಸ್ ಟಿಕೆಟ್ ಕೊಡಲು ಕೈ ನಾಯಕರು ಪ್ರಯತ್ನ ನಡೆಸಿದ್ದಾರೆ. ಈ ಮಧ್ಯೆ ಆಡಳಿತಾರೂಢ ಬಿಜೆಪಿ ಸರ್ಕಾರ ನಾಲೆ ದುರಸ್ಥಿ ಮೂಲಕ ಉಪ ಚುನಾವಣೆ ಸಿದ್ಧತೆ ಆರಂಭಿಸಿದೆ.
key words : Preparing-by-election-Diwali-Gift-Musky-Field-Given-state-government