ನವದೆಹಲಿ,ಜೂನ್,7,2024 (www.justkannada.in): ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಇದೀಗ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.
ಇಂದು ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಅವರಿಗೆ ಸರ್ಕಾರ ರಚಿಸಲು ಆಹ್ವಾನ ಪತ್ರ ನೀಡಿದರು.
ಇಂದು ಬೆಳಿಗ್ಗೆ ನಡೆದ ಎನ್ ಡಿಎ ಸಂಸದೀಯ ಸಭೆಯಲ್ಲಿ ಸಂಸದರು ನರೇಂದ್ರ ಮೋದಿ ಅವರನ್ನ 18ನೇ ಲೋಕಸಭೆ ನಾಯಕರಾಗಿ ಆಯ್ಕೆ ಮಾಡಿದರು. ಇದೀಗ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಭಾನುವಾರ ಸಂಜೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ ಇದೆ.
Key words: President, Draupadi Murmu, Modi, form, government