ಭದ್ರತಾ ಲೋಪ: ಮೋದಿ ಭೇಟಿ ಮಾಡಿದ ರಾಷ್ಟ್ರಪತಿ ಹೇಳಿದ್ದಿಷ್ಟು…

ಬೆಂಗಳೂರು, ಜನವರಿ 07, 2022 (www.justkannada.in): ರಾಷ್ಟ್ರಪತಿ ಕೋವಿಂದ್‌ ಅವರು ಪ್ರಧಾನಿ ಮೋದಿಯವರನ್ನು ರಾಷ್ಟ್ರಪತಿ ಭವನಕ್ಕೆ ಆಹ್ವಾನಿಸಿ, ಕುಶಲೋಪರಿ ವಿಚಾರಿಸಿದ್ದಾರೆ.

ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯಿಂದಾಗಿ ಭಟಿಂಡಾದ ಫ್ಲೈಓವರ್‌ನಲ್ಲಿ ಪ್ರಧಾನಿ ಮೋದಿ 20 ನಿಮಿಷಗಳ ಕಾಲ ಕಾಯಬೇಕಾಗಿ ಬಂದ ಘಟನೆ ಬಗ್ಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಪ್ರತಿಕ್ರಿಯಿಸಿದ್ದಾರೆ. ಪ್ರಕರಣದ ಬಗ್ಗೆ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.

ಭದ್ರತಾ ಲೋಪ ಘಟನೆ ಬಗ್ಗೆ ಸುಮಾರು 30 ನಿಮಿಷಗಳ ಕಾಲ ಚರ್ಚಿಸಿದ್ದಲ್ಲದೆ, ಗಂಭೀರ ಲೋಪದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬುಧವಾರ ಆದ ಘಟನೆ ಸಾಮಾನ್ಯದ್ದಲ್ಲ, ಅದೊಂದು ಗಂಭೀರ ಲೋಪ ಎಂದಿದ್ದಾರೆ.

ಪಂಜಾಬ್‌ನಲ್ಲಿ ನಡೆದಂತೆ ಮುಂದೆಂದೂ ಪ್ರಧಾನಿಯವರ ಭದ್ರತೆಯಲ್ಲಿ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ.