ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸರ್ಕಾರಕ್ಕೆ ಗಡುವು ನೀಡಿರುವ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರ ನಿರ್ಧಾರಕ್ಕೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸಿಸಿ ಪಾಟೀಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ವೀರಶೈವ ಲಿಂಗಾಯತ ಸಚಿವರು ಶಾಸಕರು, ಪರಸ್ಪರ ಬೇಸರ ಅಸಮಾಧಾನ ಹೊರಹಾಕಿದ್ದಾರೆ. ಮೀಸಲಾತಿಗಾಗಿ ಹೀಗೆ ಸರ್ಕಾರಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ ಕಾನೂನು ಚೌಕಟ್ಟಿನ ಒಳಗೆ ಸಂವಿಧಾನ ಚೌಕಟ್ಟಿನ ಒಳಗೆ ಕೆಲಸ ಮಾಡಬೇಕಾಗುತ್ತದೆ. ಇಂಥ ಸಂದರ್ಭದಲ್ಲಿ ಸರ್ಕಾರಕ್ಕೆ ಗಡುವು ಕೊಡುವುದು ಒಳ್ಳೆಯದಲ್ಲ ಎಂದು ಸಚಿವರು ಅಸಮಾಧಾನ ಹೊರಹಾಕಿದ್ದಾರೆ.

Key words: pressure – government-Minister-outrage-Swamiji’s- deadline – reservation