ಬೆಂಗಳೂರು,ಜುಲೈ,13,2023(www.justkannada.in): ಹಾಲಿನ ದರ ಏರಿಕೆಗೆ ಸಾಕಷ್ಟು ಒತ್ತಾಯ ಬರುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ ಸಚಿವ ವೆಂಕಟೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವ ವೆಂಕಟೇಶ್, ಹಾಲಿನ ದರ ಏರಿಸುವಂತೆ ರೈತರು, ಒಕ್ಕೂಟದಿಂದ ಒತ್ತಾಯವಿದೆ. ಹಾಲಿನ ದರ 5 ರೂ.ಗೆ ಹೆಚ್ಚಿಸುವಂತೆ ರೈತರು ಬೇಡಿಕೆ ಮುಂದಿಟ್ಟಿದ್ದಾರೆ. ಹಾಲಿನ ದರ 5 ರೂ.ಗೆ ಹೆಚ್ಚಿಸುವಂತೆ ರೈತರ ಬೇಡಿಕೆ ಇದೆ. ಈ ಸಂಬಂಧ ಸಿಎಂ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಶೀಘ್ರದಲ್ಲೇ ಹಾಲಿನ ದರ ಏರಿಕೆ ಮಾಡುತ್ತೇವೆ. ಪ್ರಮುಖವಾಗಿ ರೈತರಿಗೆ ಅನುಕೂಲವಾಗಬೇಕು. ಆದ್ದರಿಂದ ಹಾಲಿನ ದರ ಏರಿಕೆ ಮಾಡುತ್ತೇವೆ. 5 ರೂ. ಏರಿಕೆ ಮಾಡಿದರೆ ಒಳ್ಳೆಯದು ಅಂತ ಹೇಳುತ್ತಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ಸಚಿವ ವೆಂಕಟೇಶ್ ತಿಳಿಸಿದರು.
Key words: Pressure – raise – milk- price – Minister -K. Venkatesh – decision -CM.