ಬೆಲೆ ಏರಿಕೆ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧಾರ

ಬೆಳಗಾವಿ ,ಜೂನ್,25,2024 (www.justkannada.in):  ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್  ಹಾಗೂ ಇಂದು ಹಾಲಿನ ದರ ಹೆಚ್ಚಳ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನ ಖಂಡಿಸಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಬಿಜೆಪಿ ನಿರ್ಧರಿಸಿದೆ.

ಈ ಕುರಿತು ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್,  ರಾಜ್ಯದಲ್ಲಿ ಬೆಲೆ ಏರಿಕೆ ಖಂಡಿಸಿ ಜುಲೈ 3 ಅಥವಾ 4ರಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಕರ್ನಾಟಕ ಸರ್ಕಾರ ಒಂದು ರೀತಿ ಹುಚ್ಚರ ಸಂತೆಯಾಗಿದೆ. ಮೊನ್ನೆಯಷ್ಟೇ ಪೆಟ್ರೋಲ್, ಡೀಸೆಲ್‌ ದರ ಏರಿಕೆ ಮಾಡಿದ್ದಾರೆ. ಈಗ ಹಾಲಿನ ದರ ಲೀಟರ್​ಗೆ 2 ರೂಪಾಯಿ ಏರಿಕೆ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ  ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Key words: Price rise- BJP –protest- CM residence