ನವದೆಹಲಿ, ಜೂ.10,2019(www.justkannada.in): ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.
ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ಭಾಷೆಗಳಲ್ಲಿ ನಟನೆಯ ಮೂಲಕ ವಿವಿಧತೆ ಮೆರೆದವರು ಗಿರೀಶ್ ಕಾರ್ನಾಡ್. ಸಾಹಿತ್ಯ ಕ್ಷೇತ್ರದಲ್ಲಿ ಗಿರೀಶ್ ಕಾರ್ನಾಡ್ ಅವರದ್ದು ದೊಡ್ಡ ಹೆಸರು. ಮಾಧ್ಯಮದ ಎಲ್ಲಾ ಪ್ರಕಾರದಲ್ಲೂ ಅವರು ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಎಲ್ಲಾ ವಿಚಾರಗಳನ್ನ ಮುಕ್ತವಾಗಿ ಮಂಡಿಸುತ್ತಿದ್ದರು. ಎಲ್ಲಾ ವಿಚಾರಗಳ ಗಟ್ಟಿಯಾಗಿ ಮಾತನಾಡುತ್ತಿದ್ದರು. ಕಾರ್ನಾಡ್ ರ ಸೇವೆ ಮುಂದಿನ ದಿನಗಳಲ್ಲಿ ಮಾದರಿಯಾಗಲಿದೆ. ಅವರು ಮುಂದಿನ ಜನಾಂಗಕ್ಕೂ ಆದರ್ಶಪ್ರಾಯರಾಗಿದ್ದಾರೆ ಎಂದು ಸಂತಾಪ ಸೂಚಿಸಿದ್ದಾರೆ.
ಹಾಗೆಯೇ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರು ಸಹ ಸಂತಾಪ ಸೂಚಿಸಿದ್ದಾರೆ. ಗಿರೀಶ್ ಕಾರ್ನಾಡ್ ಅವರನ್ನ ಕಳೆದುಕೊಂಡು ಸಾಂಸ್ಕೃತಿಕ ಜಗತ್ತು ಬಡವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
Key words: Prime Minister Modi and President Ramanath Kovind Condolences Girish Karnad’s death.
#Prime MinisterModi #PresidentRamanathKovind #Condolences #Girish Karnad #death.