ಮೈಸೂರು, ಏಪ್ರಿಲ್ 04, 2023 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಮಧುಮಲೈಗೆ ಭೇಟಿ ಮಾಡಿ ಆಸ್ಕರ್ ಪ್ರಶಸ್ತಿ ಗಳಿಸಿದ ‘ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿ ಚಿತ್ರದಲ್ಲಿ ನಟಿಸಿರುವ ಬೊಮ್ಮ ಹಾಗೂ ತಂಡದೊಂದಿಗೆ ಸಂವಾದ ನಡೆಸಲಿದ್ದಾರೆ.
ಹೌದು. ಆಸ್ಕರ್ ಪ್ರಶಸ್ತಿ ಮೂಲಕ ವಿಶ್ವದ ಗಮನ ಸೆಳೆದ ‘ಎಲಿಫ್ಯಾಂಟ್ ವಿಷ್ಪರರ್ಸ್’ ತಂಡವನ್ನು ಮೋದಿ ಭೇಟಿ ಮಾಡಲಿದ್ದಾರೆ.
ಏಪ್ರಿಲ್ 8ರಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ. ವಿಮಾನದ ಮೂಲಕ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 9ರಂದು ಬೆಳಗ್ಗೆ 6 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಂಡೀಪುರಕ್ಕೆ ತೆರಳುತ್ತಾರೆ. ಅಲ್ಲಿ ಸಫಾರಿ, ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ.
ನಂತರ ತೆಪ್ಪಕಾಡು, ಮಧುಮಲೈ ಕಡೆಗೆ ತೆರಳಿ ಬೊಮ್ಮ ಮತ್ತು ತಂಡವನ್ನು ಭೇಟಿ ಮಾಡಲಿದ್ದಾರೆ.
ನಂತರ ಹೆಲಿಕಾಪ್ಟರ್ ಮೂಲಕ ಮತ್ತೆ ಮೈಸೂರಿಗೆ ಆಗಮಿಸಲಿದ್ದಾರೆ. ನಂತರ ಬೆಳಗ್ಗೆ 10 ಗಂಟೆಗೆ ಮುಕ್ತ ವಿವಿ ಸಭಾಂಗಣದಲ್ಲಿ ಹುಲಿ ವರದಿ ಬಿಡುಗಡೆ ಮಾಡಲಿದ್ದಾರೆ. ಇದು 2 ಗಂಟೆಗಳ ಕಾರ್ಯಕ್ರಮವಾಗಿರುತ್ತದೆ.
ದೇಶದ ನಾನಾ ರಾಜ್ಯಗಳು ಸೇರಿದಂತೆ ವಿದೇಶಗಳಿಂದಲೂ ಹಲವಾರು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಮೈಸೂರಿನಿಂದ ಹೊರಡಲಿದ್ದಾರೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.