ಮೈಸೂರು,ಜೂನ್,24,2021(www.justkannada.in): ಲಸಿಕೆ ಪಡೆದವರಿಗೆ ನೀಡುತ್ತಿರುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರ ಹಾಕುತ್ತಿರುವುದಕ್ಕೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಜನರ ತೆರಿಗೆ ದುಡ್ಡಿನಿಂದ ಸಂಗ್ರಹವಾದ ಹಣದಿಂದ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಹಾಗಾಗಿ ಲಸಿಕೆ ಪಡೆಯುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ಭಾವಚಿತ್ರ ಹಾಕುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.
ಕೊರೊನಾ ಲಸಿಕೆ ಪಡೆದವರ ಪ್ರಮಾಣ ಪತ್ರದಲ್ಲಿ ಪ್ರಧಾನಿ ಭಾವಚಿತ್ರ ಹಾಕುವುದಾದರೆ, ಕೊರೊನಾದಿಂದ ಸಾವನ್ನಪ್ಪುವವರ ಮರಣ ಪ್ರಮಾಣ ಪತ್ರದಲ್ಲೂ ಪ್ರಧಾನಿ ಮೋದಿಯವರ ಭಾವಚಿತ್ರ ಹಾಕಲಿ ಎಂದು ಎಂ.ಲಕ್ಷ್ಮಣ್ ಟೀಕಿಸಿದ್ದಾರೆ.
Key words: Prime Minister- Modi- photo-vaccine –recipient-KPCC spokesperson- M Laxman -objected.