ಯಾದಗಿರಿ,ಜನವರಿ,17,2023(www.justkannada.in): ಜನವರಿ 19ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಯಾದಗಿರಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 19ರಂದು ಪ್ರಧಾನಿ ಮೋದಿ ಹುಣಸಗಿ ತಾಲೂಕಿನ ಕೊಡೆಕಲ್ನಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ಜನವರಿ.19ರಂದು ಹುಣಸಗಿ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಾಗಿದೆ ಎಂದು ಹುಣಸಗಿ ತಹಶೀಲ್ದಾರ್ ಜಗದೀಶ್ ಚೌರ್ ಮಾಹಿತಿ ನೀಡಿದ್ದಾರೆ.
ಪ್ರಧಾನಿ ಮೋದಿಯವರು 1,050 ಕೋಟಿ ರೂ. ವೆಚ್ಚದಲ್ಲಿ ಬಸವಸಾಗರ ಜಲಾಶಯಕ್ಕೆ ನಿರ್ಮಾಣ ಮಾಡಿರುವ 365 ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಹಾಗೇ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಜಲಧಾರೆ ಯೋಜನೆಯ 2,004 ಕೋಟಿ ರೂ. ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.
Key words: Prime Minister-Modi-visit- Yadgiri -January 19.