ಬೆಂಗಳೂರು,ಜನವರಿ,30,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ ಮುಂದುವರೆದಿದ್ದು ಇತ್ತೀಚೆಗಷ್ಟೆ ಕಲ್ಯಾಣ ಕರ್ನಾಟಕಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಇದೀಗ ಮತ್ತೆ ಫೆಬ್ರವರಿ 6ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಫೆಬ್ರವರಿ 6 ರಂದು ಕರುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಫೆ.6 ರಂದು ಬೆಳಿಗ್ಗೆ 10:55 ಕ್ಕೆ ಬೆಂಗಳೂರು ಏರ್ಪೋರ್ಟ್ ಆಗಮಿಸಲಿರುವ ಪ್ರಧಾನಿ ಮೋದಿ ವಿಮಾನನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರು ಅಂತರ್ ರಾಷ್ಟ್ರೀಯ ಎಕ್ಸಿಬಿಷನ್ ಸೆಂಟರ್ ಪ್ರಯಾಣ ಬೆಳಸಲಿದ್ದಾರೆ.
ಬೆಳಿಗ್ಗೆ 11:25 ಕ್ಕೆ ರಸ್ತೆ ಮೂಲಕ ಬಿಐಇಸಿ ತಲುಪಲಿರುವ ಮೋದಿ, ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿಲಿದ್ದಾರೆ. ಮಧ್ಯಾಹ್ನ 2:45 ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ತುಮಕೂರಿನ ಗುಬ್ಬಿಗೆ ಪ್ರಯಾಣ ಬೆಳಸಲಿದ್ದು, 3:30ಕ್ಕೆ ಹೆಚ್.ಎ. ಎಲ್ ಹೆಲಿಕ್ಯಾಪ್ಟರ್ ತಯಾರಿಕ ಘಟಕ ಉದ್ಘಾಟನೆ ಮಾಡಲಿದ್ದಾರೆ.
ಜಲಜೀವನ್ ಮಿಷನ್ ಯೋಜನೆಗಳನ್ನು ಉದ್ಘಾಟನೆ ಮಾಡಲಿರುವ ಮೋದಿ, ಸಂಜೆ 4:40ಕ್ಕೆ ತುಮಕೂರು ಹೆಲಿಪ್ಯಾಡ್ ನಿಂದ ಬೆಂಗಳೂರು ವಿಮಾನ ನಿಲ್ದಾಣದತ್ತ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 5.20ಕ್ಕೆ ನವದೆಲಿಗೆ ತೆರಳಲಿದ್ದಾರೆ.
Key words: Prime Minister -Narendra Modi- again- visit – state – February 6.