ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತ್ಯಂತ ಜನಪ್ರಿಯ ನಾಯಕ ಎನಿಸಿಕೊಂಡಿದ್ದಾರೆ.
ರಾಜಕೀಯ ಬೇಹುಗಾರಿಕೆ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸಿರುವ ಸಮೀಕ್ಷೆ ಪ್ರಕಾರ, 22 ರಾಷ್ಟ್ರಗಳ ನಾಯಕರ ಪೈಕಿ ಮೋದಿ ಅಗ್ರಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರನ್ನು ಹಿಂದಿಕ್ಕಿ, ಜಗತ್ತಿನ ಅತ್ಯಂತ ಜನಪ್ರಿಯ ನಾಯಕ ಎನಿಸಿಕೊಂಡಿದ್ದಾರೆ.
‘ಅನುಮೋದಿತ ರೇಟಿಂಗ್ಗಳು, 2023ರ ಜನವರಿ 26-31ರ ಅವಧಿಯಲ್ಲಿ ಸಂಗ್ರಹಿಸಿದ ಅಂಕಿ-ಅಂಶಗಳನ್ನು ಆಧರಿಸಿವೆ’ ಎಂದು ಅಧಿಕೃತ ವೆಬ್ಸೈಟ್ನಲ್ಲಿ ತಿಳಿಸಲಾಗಿದೆ.