ಬೆಂಗಳೂರು,ಆಗಸ್ಟ್,30,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ನಡುವೆ ಈಗಾಗಲೇ 9,10 ಮತ್ತು ಪಿಯುಸಿ ತರಗತಿಗಳನ್ನ ಆರಂಭಿಸಲಾಗಿದ್ದು , ಪ್ರಾಥಮಿಕ ತರಗತಿಗಳ ಆರಂಭಕ್ಕೆ ಇಂದು ಮುಹೂರ್ತ ಫಿಕ್ಸ್ ಆಗಲಿದೆ.
ಈ ಮಧ್ಯೆ 1 ರಿಂದ 8 ನೇ ತರಗತಿ ಶಾಲೆಗಳನ್ನ ಆರಂಭಿಸಬೇಕು ಎಂದು ಖಾಸಗಿ ಶಾಲಾ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ಈ ಕುರಿತು ಇಂದು ಮಾತನಾಡಿದ ರುಪ್ಸಾ ಕರ್ನಾಟಕ ಅಧ್ಯಕ್ಷ ಹಾಲನೂರು ಲೇಪಾಕ್ಷಿ, ರಾಜ್ಯದಲ್ಲಿ 1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭ ಮಾಡಬೇಕು. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ 1-8 ನೇ ತರಗತಿ ಆರಂಭಿಸುವಂತೆ ತೀರ್ಮಾನ ಕೈಗೊಳ್ಳಬೇಕು. ಸಿಎಂ ಕೊಟ್ಟ ಮಾತನ್ನ ಉಳಿಸಿಕೊಳ್ಳುವ ವಿಶ್ವಾಸವಿದೆ ಎಂದರು.
ಇನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿಕ್ಷಣ ಸಚಿವರು ಅಧಿಕಾರಿಗಳ ಸಭೆ ನಡೆಯಲಿದ್ದು ಸಭೆಯಲ್ಲಿ ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭಿಸುವ ಕುರಿತು ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಶಾಲೆ ಆರಂಭದ ಕುರಿತಂತೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
Key words: Private school- union- demands- 1st to 8th -start