ಮನೆಗೆ ಬಿಜೆಪಿ ಮುತ್ತಿಗೆ ಹಾಕಲು ಬಂದ್ರೆ ಸ್ವಾಗತ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ,ಜನವರಿ,4,2025 (www.justkannada.in): ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಮನೆಗೆ ಬಿಜೆಪಿ ಮುತ್ತಿಗೆ ಹಾಕಲು ಬಂದ್ರೆ ಸ್ವಾಗತ ಎಂದಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ತಮ್ಮ ಹೇಳಿಕೆ ಬದಲಾಯಿಸುತ್ತಿದ್ದಾರೆ. ಏನು ಬೇಕು ಅಂತ ಸ್ಪಷ್ಟವಾಗಿ ಹೇಳುತ್ತಿಲ್ಲ. ನಾನು ಸಚಿನ್  ಕುಟುಂಬದ ಜತೆ ಮಾತನಾಡಿದ್ದೇನೆ ಬಿಜೆಪಿಯವರು  ಹೇಳಿದಂತೆ ಕುಣಿಯಲು ಆಗಲ್ಲ.  ಸಚಿನ ಕುಟುಂಬಸ್ಥರಿಗೆ ಭರವಸೆ ನೀಡಿದ್ದೇನೆ ಎಂದರು.

ಬಿಜೆಪಿಗೆ ಸಿಬಿಐ ಮೇಲೆ ಯಾಕೆ ಇಷ್ಟು ಪ್ರೀತಿ.  ಹೆಣಬಿದ್ದರೆ ಸಾಕು ಬಿಜೆಪಿ ನಾಯಕರಿಗೆ ಸಂಭ್ರಮ.  ಏನೇದರೂ ನಾವು ನ್ಯಾಯ ಕೊಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: BJP, protest, Minister, Priyank Kharge