ಮೈಸೂರು,ಡಿಸೆಂಬರ್,31,2020(www.justkannada.in): ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿಪಿಐ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ರಾಷ್ಟ್ರೀಯ ಹಿಂದೂ ಸಮಿತಿಯು ನಗರದ ಅಶೋಕ್ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದೆ.
ನಿನ್ನೆ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಸಂಭ್ರಮಾಚಾರಣೆಯಲ್ಲಿ ತೊಡಗಿದ್ದ ವೇಳೆ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಾಲಾಗಿತ್ತು. ಈ ಹಿನ್ನೆಲೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ರಾಷ್ಟ್ರೀಯ ಹಿಂದೂ ಸಮಿತಿಯ ರಾಷ್ಟ್ರಧ್ಯಕ್ಷ ವಿಕಾಸ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಅಶೋಕಪುರಂ ಠಾಣೆಯಲ್ಲಿ SDPI ನ ಕಾರ್ಯಕರ್ತರ ವಿರುದ್ದ ದೂರು ದಾಖಲಿಸಲಾಯಿತು.
ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣ ಫಲಿತಾಂಶ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಜ಼ಿಂದಾಬಾದ್ ಎಂದು ಕೂಗಿದ ಕಾರಣ ಭಾರತ ದೇಶದ ಅಖಂಡತೆಗೆ ತೇಜೊವಧೆ ಮಾಡಲು ಮುಂದಾದ ಹಿನ್ನೆಲೆ ರಾಷ್ಟ್ರೀಯ ಹಿಂದೂ ಸಮಿತಿಯ ಸದಸ್ಯರು ದೂರು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಪದಾಧಿಕಾರಿಗಳಾದ ಪ್ರದೀಪ್ ತೇಜಸ್ ಹಾಗು ಚೇತನ್ ಪಾಲ್ಗೋಂಡಿದ್ದರು.
Key words: Pro-Pak slogan-dakshina kannada-Mysore- complaint -against -SDPI activists …