ಅಪಘಾತದಲ್ಲಿ ಪ್ರೊಬೆಷನರಿ IPS ಅಧಿಕಾರಿ ಸಾವು: ಸಿಎಂ ಸಿದ್ದರಾಮಯ್ಯ ಸಂತಾಪ

ಹಾಸನ,ಡಿಸೆಂಬರ್,2,2024 (www.justkannada.in):  ಐಪಿಎಸ್​ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೈಸೂರು-ಹಾಸನ ರಸ್ತೆಯ ಕಿತ್ತಾನೆ ಗ್ರಾಮದ ಬಳಿ ಹರ್ಷಬರ್ಧನ್ ಅವರಿದ್ದ ಬೋಲೇರೋ ಜೀಪ್​ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಹರ್ಷಬರ್ಧನ್ ​ಅವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್ ಸಾವಿಗೆ ಸಿಎಂ ಸಿದ್ದರಾಮಯ್ಯ ಸಂತಾಪ

ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು.

ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

Key words: Probationary IPS officer, dies, CM Siddaramaiah, condoles