ಮಂಗಳೂರು,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲೂ ಪ್ರತಿಭಟನೆ ಕಿಚ್ಚು ಜೋರಾಗಿದ್ದು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬೆಂಗಳೂರು, ಮೈಸೂರು, ಕಲ್ಬುರ್ಗಿ, ಹಾಸನ ಬಳಿಕ ಇದೀಗ ಮಂಗಳೂರಿನಲ್ಲೂ ಪೌರತ್ವ ಮಸೂದೆ ವಿರೋಧಿಸಿ ಪ್ರತಿಭಟನೆ ಹೆಚ್ಚಾಗಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಸಲಾಗುತ್ತಿದ್ದ ಪ್ರತಿಭಟನೆ ವ್ಯಾಪಕ ಸ್ವರೂಪ ಪಡೆದಿದ್ದು, ಪೊಲೀಸರ ಮೇಲೆ ಪ್ರತಿಭಟನಾಕಾರರಿಂದ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘೂ ಲಾಠಿ ಚಾರ್ಜ್ ನಡೆಸಿದ್ದಾರೆ. ಹಾಗೆಯೇ ರಾವ್ ಅಂಡ್ ರಾವ್ ಸರ್ಕಲ್ ನಲ್ಲೂ ಕಲ್ಲು ತೂರಾಟ ನಡೆಸಲಾಗಿದ್ದು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ ಮುಂದೆ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಇದನ್ನು ಲೆಕ್ಕಿಸದೇ ಮೈಸೂರು ಸರ್ಕಲ್, ಟೌನ್ ಹಾಲ್ ಎದುರು ಪ್ರತಿಭಟನೆ ನಡೆಸಲಾಗಿದೆ.
ಈ ನಡುವೆ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಮೊದ ಮೊದಲು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ, ತೀವ್ರ ಸ್ವರೂಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ಮಾಡಿದ್ದು ಅಶ್ರುವಾಯು ಪ್ರಯೋಗ ಮಾಡಲಾಗಿದೆ.
Key words: Protest -against – Citizenship Amendment Act- Lathicharge-police