ಬೆಂಗಳೂರು, ಡಿಸೆಂಬರ್ 5,2020(www.justkannada.in): ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಬಂದ್ಗೆ ಕರೆ ನೀಡಿದ್ದು ರಾಜ್ಯದ ಹಲವೆಡೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಬೆಂಗಳೂರಿನ ಟೌನ್ಹಾಲ್ ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಆರಂಭವಾಗಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಹಲವು ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಹೊಸೂರು ರಸ್ತೆಯ ಹಳೇ ಚಂದಾಪುರ ಬಳಿ ಡಿಪೋ ನಂ 32 ರ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೂ ಮರಾಠ ಅಭಿವೃದ್ಧಿ ನಿಗಮ ವಿರೋದಿಸಿ ರಾಜ್ಯಾದ್ಯಂತ ವಿವಿಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಕಿಚ್ಚು ಹೆಚ್ಚಾಗಿದೆ. ಚಿತ್ರದುರ್ಗದ ಗಾಂಧಿ ವೃತ್ತದ ಬಳಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಅಂಗವಾಗಿ ಗದಗದಲ್ಲೂ ಪ್ರತಿಭಟನೆ ನಡೆದಿದೆ. ಮುಳಗುಂದ ನಾಕಾದಲ್ಲಿ ಬೆಳಗ್ಗೆ ಆರು ಗಂಟೆಗೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮುಖಕ್ಕೆ ಕಪ್ಪುಪಟ್ಟಿ ಧರಿಸಿ, ಹಲಗೆ ಬಾರಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ನಡುವೆ ಪ್ರತಿಭಟನಾಕಾರರು ಸಾರಿಗೆ ಬಸ್ ತಡೆಯಲು ಮುಂದಾಗಿದ್ದು ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಕೆಲಕಾಲ ವಾಗ್ವಾದ ನಡೆಯಿತು. ರಾಣಿ ಚೆನ್ನಮ್ಮ ವೃತ್ತದಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಬಸವರಾಜ ಪಾಟೀಲ ಯತ್ನಾಳ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು, ಚಾಮರಾಜನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
english summary…
Protest against Maratha Development Corporation: Stones pelted on buses, tyres set on fire
Bengaluru, Dec. 5, 2020 (www.justkannada.in): Protests were held across the State by several pro-Kannada organisations which had called for a Statewide bundh expressing ire on the State Government on forming of the Maratha Development Corporation.
Members of several pro-Kannada organisations staged a protest in front of the town hall in Bengaluru today. Heated arguments between the protestors and police were reported on the spot. The police took several of them into custody. Reports of stone-pelting on BMTC bus, depot No. 32, on Hosur road, near Chandapura has been reported. The protestors set a few tyres on fire at the Gandhi circle in Chitradurga and shouted slogans against the State government.
Keywords: Bundh/ pro-kannada organisations/ protest/ stone pelting
Key words: Protest -against -Maratha Development Corporation- Outrage –govrnament