ಸಚಿವ ಬಿ.ನಾಗೇಂದ್ರ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜೀನಾಮೆಗೆ ಆಗ್ರಹ.

ಬಳ್ಳಾರಿ,ಮೇ,29,2024 (www.justkannada.in): ಎಸ್.ಟಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಮಾಜಿ ಸಚಿವ ಶ್ರಿರಾಮುಲು, ಸೋಮಶೇಖರ್,  ಲಕ್ಷ್ಮೀ ಅರುಣಾ ಅವರ ನೇತೃತ್ವದಲ್ಲಿ   ಬಳ್ಳಾರಿಯಲ್ಲಿ ಸಚಿವ ನಾಗೇಂದ್ರ ವಿರುದ್ದ ಪ್ರತಿಭಟನೆ ನಡೆಸಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ.  ಪ್ರತಿಭಟನಾ ರ್ಯಾಲಿ ನಡೆಸಿ  ಜಿಲ್ಲಾಧಿಕಾರಿಗೆ ದೂರು ನೀಡಲಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಎಸ್.ಟಿ ನಿಗಮದ ಅಧಿಕಾರಿ ಚಂದ್ರಶೇಖರ್ ಎಂಬುವವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದರು.

Key words: Protest, against, Minister, B. Nagendra