ಮೈಸೂರು,ಜನವರಿ,28,2021(www.justkannada.in) : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮೈಸೂರು ಸಮಾನ ಮನಸ್ಕರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿಚೌಕ ವೃತ್ತದಲ್ಲಿ ಕುದುರೆಗಾಡಿ ಏರಿದ ಪ್ರತಿಭಟನಕಾರರು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.
ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದ್ದು ಇದರಿಂದ ಸಾರ್ವಜನಿಕರಿಗೆ ಜೇಬಿಗೆ ಕತ್ತರಿ ಬೀಳುತ್ತಿದೆ ಎಂದು ಕಿಡಿಕಾರಿದರು.ಕೇಂದ್ರ ಸರಕಾರವು ಪೆಟ್ರೋಲ್, ಡೀಸೆಲ್ ಸೇರಿದಂತೆ ಗ್ಯಾಸ್ ಹಾಗೂ ದಿನನಿತ್ಯದ ಪದಾರ್ಥಗಳ ಬೆಲೆ ಏರಿಕೆ ಮಾಡುತ್ತಿರುವುದರಿಂದ ಜನರು ಪರಿತಪಿಸುವಂತಾಗಿದೆ. ಕೇಂದ್ರ ಸರಕಾರ ಬೆಲೆ ಏರಿಕೆಯ ನಿಯಂತ್ರಣ ಮಾಡುವ ಮೂಲಕ ಜನತೆ ಪರಿತಪಿಸುವಂತ್ತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ವೇದಿಕೆ ಸಂಚಾಲಕ ಒಂಟಿಕೊಪ್ಪಲ್ ಗುರುರಾಜ್, ಜೆ.ಯೋಗೇಶ್, ಸಿ.ರೇವಣ್ಣ, ವಿ.ಮಧು, ಸ್ವರೂಪ್, ಎಸ್.ಆರ್.ರವಿಕುಮಾರ್, ಎಸ್.ಶಿವಕುಮಾರ್ ಗೌಡ ಇತರರು ಭಾಗವಹಿಸಿದ್ದರು.
key words : Protest-against-petrol-diesel-price-hike