ಕಲಬುರ್ಗಿ,ಜನವರಿ,4,2025 (www.justkannada.in): ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮಗೆ ಆಗ್ರಹಿಸಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ, ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ಸದಸ್ಯ ಸಿ.ಟಿ ರವಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಇತರೆ ಬಿಜೆಪಿ ಮುಖಂಡರನ್ನ ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ನೇತೃತ್ವದಲ್ಲಿ ವಶಕ್ಕೆ ಪಡೆದರು
ಡಿಸಿ ಕಚೇರಿ ಬಳಿಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು . ಬಿಜೆಪಿ ಮುಖಂಡರನ್ನು ಸಾರಿಗೆ ಬಸ್ಸುಗಳಲ್ಲಿ ವಶಕ್ಕೆ ಪಡೆದು, ತುಂಬಿಸಿಕೊಂಡು ಕರೆದೊಯ್ದರು.
Key words: Minister Priyank Kharge, residence, protest, BJP leaders