ಬೆಂಗಳೂರು,ಜನವರಿ,7,2023(www.justkannada.in): ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ 13 ಕಾಂಗ್ರೆಸ್ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಮಾಜಿ ಸಚಿವರಾದ ಟಿ.ಬಿ ಜಯಚಂದ್ರ, ಕೆಜೆ ಜಾರ್ಜ್, ಯುಟಿ ಖಾದರ್, ಶಾಸಕ ರಿಜ್ವಾನ್ ಅರ್ಷಾದ್, ವೀರಪ್ಪಮೊಯ್ಲಿ, ಸೌಮ್ಯರೆಡ್ಡಿ ಸೇರಿದಂತೆ 13 ಕಾಂಗ್ರೆಸ್ ನಾಯಕರಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆ ಪೊಲೀಸರು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.
Key words: Protest – IT- office-Court -summons -13 Congress leaders.