ಧಾರವಾಡ,ಡಿ,26,2019(www.justkannada.in): ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ಮುಂದುವರೆದಿದ್ದು ಇಂದು ಸಹ ಕಲ್ಬುರ್ಗಿ, ಧಾರವಾಡ ಮತ್ತು ಬಾಗಲಕೋಟೆಯಲ್ಲಿ ಅಲ್ಪಸಂಖ್ಯಾತರು ಧರಣಿ ನಡೆಸಿದ್ದಾರೆ.
ಕಲ್ಬುರ್ಗಿಯ ಜಿಲ್ಲಾಧಿಕಾರಿ ಕಚೇರಿ ಮುಂದು ಮುಸ್ಲೀಂ ಸಮುದಾಯದ ಮಹಿಳಯರು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಸುಮಾರು 5 ಸಾವಿರ ಮಂದಿ ಭಾಗವಹಿಸಿದ್ದು ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಇನ್ನು ಬಾಗಲಕೋಡಯಲ್ಲಿ ಸಿಎಎ ವಿರೋಧಿಸಿ ಅಲ್ಪಸಂಖ್ಯಾತರು ಮತ್ತು ದಲಿತರು ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಸಿಎಎ ವಿರೋಧಿಸಿ ಮುಸ್ಲೀಂಸಂಘಟನೆ ಪ್ರಗತಿಪರರು ಧಾರವಾಡದ ಕಡಪಾ ಮೈದಾನದಲ್ಲಿ ಸಮಾವೇಶ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿ.ಎ.ಎ ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳು ಮುಂಡಗೋಡಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ್ದು, ಎನ್ಆರ್ಸಿ, ಸಿಎಎ ಹಿಂಪಡೆಯುವಂತೆ ಒತ್ತಾಯಿಸಿ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
Key words: Protest – Kalburgi- Dharwad – protest -Citizenship Amendment Act