ಮಂಗಳೂರು,ಮಾರ್ಚ್,25,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಸಂವಿಧಾನ ತಿದ್ದುಪಡಿ ಹೇಳಿಕೆ ಖಂಡಿಸಿ ಇಂದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
ನಗರದ ಕುದ್ಮುಲ್ ರಂಗರಾವ್ ಪುರಭವನದ ಎದುರಿನ ಅಂಬೇಡ್ಕರ್ ಪ್ರತಿಮೆ ಬಳಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆ ಆರಂಭಿಸಿದ ಬಿಜೆಪಿ ಮುಖಂಡರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ದೇಶದ ಜನರ ಬಳಿ ಕ್ಷಮೆ ಯಾಚಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜಾ, ವೇದವ್ಯಾಸ್ ಕಾಮತ್, ಉಮಾನಾಥ್ ಕೋಟ್ಯಾನ್, ಭಾಗೀರಥಿ ಮುರುಳ್ಯ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.
Key words: Protest, Mangaluru, condemning, DCM DK Shivakumar, statement