ಮೈಸೂರು,ಡಿ,19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದೆಲ್ಲೆಡೆ ಹಾಗೂ ರಾಜ್ಯದಲ್ಲೂ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಬ್ಬರು ಸಮಾಜಿಕ ಹೋರಾಟಗಾರರು ಬಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ಮೈಸೂರಿನಲ್ಲಿ ಮೂರು ದಿನಗಳ ಡಿ.19 ರಿಂದ 21ರ ವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ ಪ್ರತಿಭಟನೆ ಮೆರವಣಿಗೆ ಬ್ರೇಕ್ ಹಾಕಿದೆ.
ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಉಗ್ರ ನರಸಿಂಹೇಗೌಡ ಹಾಗೂ ಮಾಜಿ ಪಾಲಿಕೆ ಸದಸ್ಯ ಶೌಕತ್ ಪಾಷಾ ನೇತೃತ್ವದಲ್ಲಿ ನಗರದ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಬಿತ್ತಿ ಪತ್ರ ಪ್ರದರ್ಶನ ಮಾಡಿ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ದ ಅಕ್ರೋಶ ವ್ಯಕ್ತಪಡಿಸಲಾಯಿತು.
Key words: Protest – two -social activists – Mysore – – Citizenship Amendment Act.