ಬೆಂಗಳೂರು,ಅಕ್ಟೋಬರ್,24,2021(www.justkannada.in): ನಾಳೆಯಿಂದ 1 ರಿಂದ 5ನೇ ತರಗತಿ ಶಾಲೆ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದ್ದು ಈ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ಹೌದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಈ ಕುರಿತು ಮಾತನಾಡಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತದೆ. ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸದಿದ್ದರೇ ಶಾಲಾ ತರಗತಿ ಬಹಿಷ್ಕರಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Key words: Protest- warning -primary -school –teachers- union -various- demands