ಬೆಂಗಳೂರು,ಫೆಬ್ರವರಿ,10,2021(www.justkannada.in) : ಖಾಸಗಿ ಶಾಲೆಗಳ ಶುಲ್ಕವನ್ನು ರಾಜ್ಯ ಸರ್ಕಾರ ಶೇ.30ರಷ್ಟು ಕಡಿಮೆ ಮಾಡಿ ಆದೇಶ ಹೊರಡಿಸಿದ್ದು, ಇದನ್ನು ವಿರೋಧಿಸಿ ಖಾಸಗಿ ಶಾಲೆಗಳ ಒಕ್ಕೂಟವು ಫೆ.23ರಂದು ಪ್ರತಿಭಟನೆ ಹಮ್ಮಿಕೊಂಡಿದೆ.
ಯಾವುದೇ ಅಭಿವೃದ್ಧಿ ಶುಲ್ಕವನ್ನು ಪಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಕ್ಯಾಮ್ಸ್,ಮಿಕ್ಸಾ,ಮಾಸ್, ಕುಸುಮ, ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲೆಗಳ ಒಕ್ಕೂಟ ನಿರ್ಧರಿಸಿವೆ.
ರಾಜ್ಯ ಸರ್ಕಾರ ಶೇ.30ರಷ್ಟು ಕಡಿತ ಎಂದು ಹೇಳಿದೆ. ಆದರೆ, ಆದೇಶದಲ್ಲಿ ಶೇ.55ರಿಂದ ಶೇ.65ರಷ್ಟು ಶುಲ್ಕ ಕಡಿತವಾಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಅನುದಾನ ನೀಡಬೇಕು.
ಕಟ್ಟಡ ಸುರಕ್ಷಿತ ಪ್ರಮಾಣ ಪತ್ರ ಹಿಂದಿನ ಶಾಲೆಗಳಿಗೆ ಕೈ ಬಿಡಬೇಕು ಎಂದು ಒತ್ತಾಯಿಸಿ ಹಾಗೂ ಆದೇಶವನ್ನು ಪುನರ್ ಪರಿಶೀಲನೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿವೆ.
key words : Protest-Private-Schools-Federation-23 February