ಮೈಸೂರು,ಮೇ,15,2019(www.justkannada.in): ಸಾರ್ವಜನಿಕರ ಸಮಸ್ಯೆ ಬಗೆಹರಿಸಿಲ್ಲವೆಂದು ಆರೋಪಿಸಿ ಮೈಸೂರು ಮಹಾನಗರ ಪಾಲಿಕೆ ಎದುರು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರು ನಗರದಲ್ಲಿ ಸಾರ್ವಜನಿಕರ ನೀರಿನ ಸಮಸ್ಯೆ, ಪಾರ್ಕ್ ಸಮಸ್ಯೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳನ್ನ ಬಗೆಹರಿಸಿಲ್ಲ ಸುಯೇಜ್ ಫಾರಂ ಸಮಸ್ಯೆ ಬಗೆಹರಿಸಿಲ್ಲವೆಂದು ಗೋವುಗಳನ್ನ ತಂದು ಸ್ಥಳೀಯರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಮೈಸೂರು ಪಾಲಿಕೆ ಆಯುಕ್ತೆ ಶಿಲ್ವನಾಗ್ ಹಾಗೂ ಅಧಿಕಾರಿಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಎಸ್.ಎ ರಾಮದಾಸ್, ಸಾರ್ವಜನಿಕರ ಸಮಸ್ಯೆಗಳು ಬಗೆಹರಿಯುವವರೆಗೂ ನಮ್ಮ ಹೋರಾಟ ನಿಲ್ಲಲ್ಲ. ನಾವು ಹಲವು ಬಾರಿ ಸಾರ್ವಜನಿಕರ ಸಮಸ್ಯೆ ಬಗೆಹರಿಸುವಂತೆ ಮಹಾನಗರ ಪಾಲಿಕೆಗೆ ಮನವಿ ಮಾಡಿ ಪತ್ರ ಬರೆದಿದ್ದೇನೆ. ಎರಡು ಸಭೆಗಳನ್ನೂ ಸಹ ಮಾಡಿದ್ದಾರೆ. ಆದರೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.
ಖಾಲಿ ಸೈಟ್ ಗಳ ಸ್ವಚ್ಛತೆ, ಸುಯೇಜ್ ಫಾರಂ ಕಸದ ಸಮಸ್ಯೆ, ಕಂದಾಯ ಕಟ್ಟಲು ಆನ್‌ಲೈನ್ ವ್ಯವಸ್ಥೆ ಇತರೆ ಸಮಸ್ಯೆಗಳನ್ನು ಬಗೆಹರಿಸುವಂತೆ ಎರಡು ವರ್ಷಗಳಿಂದ ಕೇಳುತ್ತಿದ್ದೇನೆ. ಆದರೆ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಕೂಡಲೇ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನ ಬಗೆಹರಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಅಧಿಕಾರಿಗಳನ್ನ ವಿರುದ್ಧ ಉಚ್ಚನ್ಯಾಯಾಲಯದ ಕೇಸ್ ಹಾಕುತ್ತೇನೆ. ಸಾರ್ವಜನಿಕರ ಸಮಸ್ಯೆ ಬಗೆಹರಿಸುವರೆಗೂ ನಮ್ಮ ಧರಣಿ ಮುಂದುವರಿಯುತ್ತದೆ ಎಂದು ಎಸ್ ಎ ರಾಮದಾಸ್ ಎಚ್ಚರಿಕೆ ನೀಡಿದರು.
Key words: protests – Mysore -city corporation- headed –MLA-SA Ramdas