ಬೆಂಗಳೂರು,ಮೇ,16,2022(www.justkannada.in): ರಾಜ್ಯದಲ್ಲಿ ನಡೆದಿರುವ ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ನ್ಯಾಯ ಒದಗಿಸುವಂತೆ ಕೋರಿ ಪ್ರಾಮಾಣಿಕ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು ಪತ್ರ ವೈರಲ್ ಆಗಿದೆ.
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಬಹಿರಂಗವಾಗುತ್ತಿದ್ದಂತೆ ಸರ್ಕಾರ ತನಿಖೆಗೆ ವಹಿಸಿ ಮರು ಪರೀಕ್ಷೆ ನಡೆಸುವುದಾಗಿ ಮಹತ್ವದ ತೀರ್ಮಾನ ತೆಗದುಕೊಂಡಿದೆ. ಆದರೆ ಈ ತೀರ್ಮಾನವನ್ನು ವಿರೋಧಿಸಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಪತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಎರಡು ಪುಟಗಳ ಪತ್ರ ಬರೆದು ನ್ಯಾಯ ಓದಗಿಸುವಂತೆ ಮನವಿ ಮಾಡಿದ್ದಾರೆ. ಆದರೆ ಈ ಪತ್ರ ಬರೆದವರು ಯಾರು ಎಂಬುದು ತಿಳಿದುಬಂದಿಲ್ಲ. ತಮ್ಮ ಹೆಸರನ್ನು ಪತ್ರದಲ್ಲಿ ನಮೂದಿಸಿಲ್ಲ. ಪಿಎಸ್‌ಐ ಪರೀಕ್ಷೆಯಲ್ಲಿ ಆಯ್ಕೆಯಲ್ಲಿ ಮೋಸ ಹೊದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನ ಜೈಲಿಗೆ ಹಾಕಿ. ಆದರೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಮೋಸ ಆಗಬಾರದು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ನಮಗೆ ನ್ಯಾಯ ಸಿಗದಿದ್ದರೇ ನಕ್ಸಲೈಟ್ ಗಳ ಜೊತೆ ಕೈಜೋಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Key words: PSI-candidates – written -PM Modi – blood – justice.