ಪಿಎಸ್ ಐ ಪರಶುರಾಮ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೊಪ್ಪಳ, ಆಗಸ್ಟ್​​​,7,2024 (www.justkannada.in): ಅನುಮಾನಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್​ಐ ಪರಶುರಾಮ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಪರಶುರಾಮ್ ಹಾಗೆಯೇ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು  ಮೃತ ಪಿಎಸ್​ಐ ಪರಶುರಾಮ್ ಅವರ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಬಳಿಕ ಮಾತನಾಡಿದ ಅವರು, ಪರಶುರಾಮ್ ಅವರ ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ್ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ಶಾಸಕ ಮತ್ತು ಅವರ ಪುತ್ರನ ಮೇಲೆ ಆರೋಪ ಮಾಡಿದ್ದಾರೆ. ಈ ಸಂಬಂಧ ತನಿಖೆಗೆ ಆದೇಶ ಮಾಡಲಾಗಿದೆ. ಆರೋಪ ಕೇಳಿ ಬಂದ ದಿನವೇ ಸಿಐಡಿ ತನಿಖೆಗೆ ಪ್ರಕರಣವನ್ನು ನೀಡಿದ್ದೇವೆ. ಅದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.

ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲ್ಲ. ಸಿಬಿಐಗೆ ನೀಡುವ ಅರ್ಹತೆ ಈ ಪ್ರಕರಣದಲ್ಲಿ ಇಲ್ಲ. ಆದರೆ ಕುಟುಂಬಕ್ಕೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇವೆ ಎಂದು  ಪರಮೇಶ್ವರ್ ತಿಳಿಸಿದರು.

Key words: PSI Parashuram,  family, 50 lakhs, Minister, Parameshwar