ಬೆಂಗಳೂರು,14,2024(www.justkannada.in): PSI ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ತನಿಖೆ ನಡೆಸಲು ಎಸ್ ಐಟಿ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, PSI ನೇಮಕಾತಿ ಹಗರಣ ಸಂಬಂಧ ಬಿ.ವೀರಪ್ಪ ಸಮಿತಿ ರಚಿಸಿದ್ದವು. ಈ ಸಂಬಂಧ ಬಿ.ವೀರಪ್ಪ ನೇತೃತ್ವದ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಸರ್ಕಾರಿ, ಖಾಸಗಿ ವ್ಯಕ್ತಿಗಳು ಸೇರಿ 113 ಜನರು ಭಾಗಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ಸಂಬಂಧ ತನಿಖೆಗೆ ಎಸ್ಟಿಐ ರಚಿಸಬೇಕೆಂದು ವೀರಪ್ಪ ಸಮಿತಿ ಶಿಫಾರಸ್ಸು ಮಾಡಿದೆ. ಹೀಗಾಗಿ ಹೆಚ್ಚುವರಿ ತನಿಖೆಗಾಗಿ ಎಸ್ಐಟಿ ರಚಿಸಲು ತೀರ್ಮಾನ ಮಾಡಿದ್ದೇವೆ ಎಂದು ಕೃಷ್ಣಭೈರೇಗೌಡ ತಿಳಿಸಿದ್ದಾರೆ.
Key words: PSI recruitment –scam- Decision – form- SIT – probe.