ಆ.15ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ.

ಬೆಂಗಳೂರು,ಆಗಸ್ಟ್,9,2021(www.justkannada.in):  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆಗಸ್ಟ್ 15 ಕ್ಕೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯುತ್ತದೆ. ಆದರೆ ಈ ಬಾರಿ ಯಾವುದೇ ಸಾಂಸ್ಕೃತಿ ಕಾರ್ಯಕ್ರಮ ನಡೆಯಲ್ಲ. ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳು, ಆಹ್ವಾನಿತರು ಮಾತ್ರ ಭಾಗವಹಿಸಲು ಅವಕಾಶವಿದ್ದು, ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಹೇಗೆ ನಡೆಯಬೇಕು ಎನ್ನುವುದರ ಬಗ್ಗೆ ಶೀಘ್ರವೇ ಸಿಎಸ್ ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದು  ಗೌರವ್ ಗುಪ್ತ ತಿಳಿಸಿದರು.

ENGLISH SUMMARY…

Independence Day to be simple – No entry for public: BBMP Chief Commissioner Gourav Gupta
Bengaluru, August 9, 2021 (www.justkannada.in): Due to the fear of the possible COVID-19 Pandemic 3rd wave, participation of the public in the Independence Day celebrations on August 15 has been restricted.
BBMP Chief Commissioner Gourav Gupta informed this today. “The programs will be held at the Manik Sha Parade grounds on August 15 as usual. But there won’t be any cultural programs this time. Only dignitaries and invitees will be allowed and entry of public will be restricted,” he said.
Keywords: BBMP/ Chief Commissioner/ Gourav Gupta/ August 15/ Independence Day/ public restricted

Key words: public –restriction- independence day- program   Chief Commissioner of BBMP Gaurav Gupta,