ಬೆಂಗಳೂರು, ಮಾ.೨೧, ೨೦೨೪ : 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ಏಕಸದಸ್ಯ ಪೀಠ ರದ್ದುಗೊಳಿಸಿದ್ದರ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಯ್ದಿರಿಸಿದ್ದು, ನಾಳೆ ಈ ಸಂಬಂಧ ಅಂತಿಮ ತೀರ್ಪು ಪ್ರಕಟಿಸಲಿದೆ.
ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈಗ ಹೈಕೋರ್ಟ್ ತೀರ್ಪಿನ ಬಗ್ಗೆ ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ನಾಳೆ ಬೆಳಗ್ಗೆ ೧೦. ೩೦ ಕ್ಕೆ ಕೋರ್ಟ್ ತೀರ್ಪು ಪ್ರಕಟಿಸಲಿದೆ.
ಘಟನೆ ಹಿನ್ನೆಲೆ :
ಕರ್ನಾಟಕ ಶಿಕ್ಷ ಣ ಕಾಯಿದೆಯಡಿ ರಾಜ್ಯ ಶಿಕ್ಷ ಣ ಇಲಾಖೆ 2023ರ ಅ.6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.
ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘಗಳು, ಸರಕಾರದ ಸುತ್ತೋಲೆ ಕಡ್ಡಾಯ ಶಿಕ್ಷ ಣ ಹಕ್ಕು ಕಾಯಿದೆ ಸೆಕ್ಷ ನ್ 30 ಮತ್ತು ಕರ್ನಾಟಕ ಶಿಕ್ಷ ಣ ಕಾಯಿದೆಯ ವಿವಿಧ ಸೆಕ್ಷ ನ್‌ಗಳ ಉಲ್ಲಂಘನೆಯಾಗಿದ್ದು, ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು ಎಂದು ಕೋರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷ ಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿತ್ತು.
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಅದನ್ನು ಅರ್ಜಿದಾರರು ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂಕೋರ್ಟ್, ಸರಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಸಮಗ್ರವಾಗಿ ವಿಚಾರಣೆ ನಡೆಸಿ ಆದಷ್ಟು ಶೀಘ್ರ ತೀರ್ಪು ನೀಡುವಂತೆ ಸೂಚಿಸಿತ್ತು.
ಇದರ ಅನ್ವಯ, ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಹೈಕೋರ್ಟ್ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.
ನ್ಯಾ. ಕೆ. ಸೋಮಶೇಖರ್ ಮತ್ತು ನ್ಯಾ. ರಾಜೇಶ್ ಕೆ. ರೈ ಅವರಿದ್ದ ವಿಭಾಗೀಯ ಪೀಠ ಸರಕಾರ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಸೋಮವಾರ ವಾದ-ಪ್ರತಿವಾದ ಆಲಿಸುವುದನ್ನು ಪೂರ್ಣಗೊಳಿಸಿದ ಬಳಿಕ ತೀರ್ಪು ಕಾಯ್ದಿರಿಸಿರುವುದಾಗಿ ಆದೇಶಿಸಿತು.
‘‘ರಾಜ್ಯ ಪಠ್ಯಕ್ರಮ ಅಳವಡಿಸಿರುವ ಎಲ್ಲಮಕ್ಕಳಿಗೂ ಸಮಾನ ಶಿಕ್ಷ ಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷ ಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ. ಅಲ್ಲದೆ, ಪರೀಕ್ಷೆಗಳು ತಮಾಷೆಯಲ್ಲ. ಮಕ್ಕಳು ಹಲವು ದಿನಗಳಿಂದ ಸಿದ್ಧತೆ ಮಾಡಿಕೊಂಡಿರುತ್ತಾರೆ. ಆದರೆ, ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ಗೊಂದಲವಾಗುತ್ತದೆ’’ ಎಂದು ಸರಕಾರಿ ವಕೀಲರು ನ್ಯಾಯಾಧಿಯಾಲಯದ ಗಮನ ಸೆಳೆದಿದ್ದರು.
‘‘ಅಲ್ಲದೆ, ರಾಜ್ಯ ಶಿಕ್ಷ ಣ ಇಲಾಖೆಗೆ ಆರ್‌ಟಿಐ ಕಾಯಿದೆಯಡಿ ಪರೀಕ್ಷೆ ನಡೆಸುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ವರ್ಷವೂ ಆರ್‌ಟಿಐ ಕಾಯಿದೆಯಡಿ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಅವಕಾಶವಿದೆ,’’ ಎಂದು ತಿಳಿಸಿದರು.
ಶಿಕ್ಷಣ ಸಂಸ್ಥೆಗಳ ಪರ ವಕೀಲರು, ‘‘ಸರಕಾರವು ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಮುಂದಾಗಿರುವುದು ಕಡ್ಡಾಯ ಶಿಕ್ಷ ಣ ಹಕ್ಕು ಕಾಯಿದೆಗೆ ತದ್ವಿರುದ್ಧವಾಗಿದೆ. ಇದು ಕಾನೂನುಬಾಹಿರ,’’ ಎಂದು ವಿವರಿಸಿದ್ದರು.
key words : public ̲ exams ̲ primary ̲school ̲ high court ̲ judgment ̲ tomorrow