ಬೆಂಗಳೂರು,ಅಕ್ಟೋಬರ್,20,2023(www.justkannada.in): ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ಜಯಚಂದ್ರ ಉಪಸ್ಥಿತರಿದ್ದರು.
2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು.
Key words: Purnima Srinivas- joins -congress-party