ಮೈಸೂರು,ಅಕ್ಟೋಬರ್,15,2020(www.justkannada.in): ಜೆಎಸ್ ಎಸ್ ವಿದ್ಯಾಸಂಸ್ಥೆಗಳಿಂದ ಲಕ್ಷಾಂತರ ಮಂದಿ ವಿದ್ಯಾರ್ಜನೆ ಮಾಡುತ್ತಿದ್ದು, ಎಲ್ಲ 8 ವಿದ್ಯಾ ಸಂಸ್ಥೆಗಳೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಅಭ್ಯಾಸ ಮಾಡಿದ ಎಲ್ಲರೂ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಜೆ ಎಸ್ ಎಸ್ ಸಂಸ್ಥೆಗಳಿಗೆ ಕ್ಯೂಎಸ್ – ಐ ಗೇಜ್ ಭಾರತೀಯ ಕಾಲೇಜು ಮತ್ತು ವಿಶ್ವವಿದ್ಯಾಲಯ ರೇಟಿಂಗ್ಸ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಸಚಿವ ಎಸ್.ಟಿ ಸೋಮಶೇಖರ್ ಮಾತನಾಡಿದರು.
ಮುಖ್ಯಮಂತ್ರಿಗಳು 8 ವಿಭಾಗಗಳ ಕೋವಿಡ್ ನಿರ್ವಹಣೆ ಬಗ್ಗೆ ಸಭೆ ನಡೆಸಿದಾಗ ಸ್ವಾಮೀಜಿಗಳು ಮೈಸೂರಿನಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಹಲವು ಉತ್ತಮ ಕ್ರಮ ತೆಗೆದುಕೊಂಡ ಬಗ್ಗೆ ಚರ್ಚೆಯಾಗಿದೆ. ಜಗದ್ಗುರು ಶ್ರೀ ಶಿವರಾತ್ರಿದೇಶೀಕೇಂದ್ರ ಮಹಾಸ್ವಾಮಿಗಳು ಸದಾ ಜನರ ಯೋಗಕ್ಷೇಮದ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ನಮಗೆ ಹೆಮ್ಮೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಇನ್ನು ಸ್ವಾಮೀಜಿಗಳು ಹೇಳಿದ ಪ್ರಕಾರ ಜನರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರೂ ಸಹ ಇದಕ್ಕೆ ಸಹಕಾರ ನೀಡಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಕೊರೋನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
Key words: QS – I-GAUGE-Indian College – University- Ratings Award -JSS Institutions-minister- st Somashekar