ರಾಜ್ಯದ ಕಾನೂನು ಸುವ್ಯವಸ್ಥೆ ಮೇಲೆ ಸಿಎಂ, ಸಚಿವರಿಗೆ ಹಿಡಿತವೇ ಇಲ್ಲ – ಆರ್.ಅಶೋಕ್ ಕಿಡಿ

ಬೆಂಗಳೂರು,ಮಾರ್ಚ್,18,2025 (www.justkananda.in):  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೂಂಡಾರಾಜ್ಯ ಸೃಷ್ಟಿಯಾಗಿದೆ.  ಕಾನೂನು ಸುವ್ಯವಸ್ಥೆ ಮೇಲೆ ಸಿಎಂ, ಸಚಿವರಿಗೆ ಹಿಡಿತವೇ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ಮಾತನಾಡಿ ಸರ್ಕಾರದ ವಿರುದ್ದ ಕಿಡಿಕಾರಿದ ಆರ್.ಅಶೋಕ್, ರಾಜ್ಯವೇ ತಲೆತಗ್ಗಿಸುವ ಪ್ರಕರಣಗಳು ನಡೆದರೂ  ಕಾಂಗ್ರೆಸ್‌ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು, ಮುಖ್ಯಮಂತ್ರಿಗೆ ಹಿಡಿತವೇ ಇಲ್ಲ.  ರಾಮನಗರದಲ್ಲಿ . ಬಿಡದಿಯ ಟೊಯೋಟ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್‌ ಎಂದು ಬರೆಯಲಾಗಿದೆ. ಜೊತೆಗೆ ಕನ್ನಡಿಗರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಬರೆಯಲಾಗಿದೆ. ಅದನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಇನ್ನೂ ಮಾಡಿಲ್ಲ ಎಂದು ಹರಿಹಾಯ್ದರು.

ಹಾವೇರಿ ಜಿಲ್ಲೆಯಲ್ಲಿ ಯುವತಿ ಸ್ವಾತಿ ಕೊಲೆ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಈ ಪ್ರಕರಣದ ಎಫ್‌ಐಆರ್‌ ಆದ ಬಳಿಕವೂ ತಾಯಿಗೆ ಮಾಹಿತಿ ನೀಡದೆ ಪೊಲೀಸರು ಪ್ರಕರಣ ಮುಚ್ಚಿಹಾಕಿದ್ದಾರೆ. ಈ ಲವ್‌ ಜಿಹಾದ್‌ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

Key words: CM and Minister, no control, law and order, R. Ashok