ಬೆಂಗಳೂರು,ಏಪ್ರಿಲ್,25,2025 (www.justkannada.in): ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತವಾಗಿ ದೂರು ನೀಡಿದ್ದಾರೆ.
ಶಿವಮೊಗ್ಗ ಬೀದರ್ ಹಾಗೂ ಧಾರವಾಡದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳ ಜನಿವಾರ ತೆಗೆಸಲಾಗಿತ್ತು. ಇದಕ್ಕೆ ಭಾರಿ ಆಕ್ಷೇಪ ವ್ಯಕ್ತವಾಗಿ ಪರೀಕ್ಷಾ ಸಿಬ್ಬಂದಿಗಳ ಈ ಕ್ರಮಕ್ಕೆ ಖಂಡನೆ ವ್ಯಕ್ತವಾಗಿತ್ತು. ಇದೀಗ ಆರ್.ಅಶೋಕ್ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತವಾಗಿ ದೂರು ನೀಡಿದ್ದಾರೆ.
ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಹಕ್ಕುಗಳಿಗೆ ಚ್ಯುತಿ ತಂದ ಆರೋಪದ ಹಿನ್ನೆಲೆ ರಾಜ್ಯ ಸರ್ಕಾರದ ನಡೆಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರ್. ಅಶೋಕ್, ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿ, ನಾಗರೀಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
Key words: Janivar, CET exam, R. Ashok, complaint, Central Human Rights Commission