ಬೆಂಗಳೂರು, ಆಗಸ್ಟ್ 25, 2021 (www.justkannada.in): ಬಿಡದಿ ಪೊಲೀಸ್ ಠಾಣೆಗೆ ರಚಿತಾ ರಾಮ್ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.
‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಸಂಭವಿಸಿದ ಅವಘಡದಲ್ಲಿ ಫೈಟರ್ ವಿವೇಕ್ ಮೃತಪಟ್ಟಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಮೋಹನ್ ಕುಮಾರ್ ರಚಿತಾ ಅವರನ್ನು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಬಿಡದಿ ಪೊಲೀಸ್ ಠಾಣೆಗೆ ಹಾಜರಾದ ರಚಿತಾ ರಾಮ್ ಪೊಲೀಸರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು.
ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆ ಅಲ್ಲ. ಇಂತಹ ದುರಂತ ನಡೆದಿರುವುದಕ್ಕೆ ನನಗೂ ನೋವು ಇದೆ ಎಂದಿದ್ದಾರೆ ರಚಿತಾ.